ಮಂಡ್ಯ:- ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನುಗ್ಗಹಳ್ಳಿ ಬಳಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 10 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಪಾಂಡವಪುರ ತಹಸೀಲ್ದಾರ್ ಬಸಪ್ಪರೆಡ್ಡಿ ರೋಣದ ನೇತೃತ್ವದಲ್ಲಿ, ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಗಾಂಜಾ ಡೀಲ್ ಮಾಡಲು ಕಾರಿನಲ್ಲಿ ಬಂದಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ರಕ್ಷಿತ್, ಗೌತಮ್ ಹಾಗೂ ಮನೋಜ್ ಬಂಧಿತ ಆರೋಪಿಗಳಾಗಿದ್ದು, ಒರಿಸ್ಸಾದಿಂದ ಗಾಂಜಾ ಖರೀದಿಸಿ ಸ್ಥಳೀಯರಿಗೆ ಮಾರಾಟ ಮಾಡಲು ತಂದಿದ್ದರು ಎನ್ನಲಾಗಿದೆ.
ಇದೀಗ ಆರೋಪಿಗಳು ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದ್ದು, ಅವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ



