ಮಂಡ್ಯ:- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಶಾಂತಿ ಕಾಲೇಜು ಮುಂಭಾಗದ ವೇದಿಕೆ ಕಾರ್ಯಕ್ರಮವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದು, ಸಮಾರಂಭ ಡಿ.22ರವರೆಗೆ ಏಳು ದಿನಗಳ ಕಾಲ ನಡೆಯಲಿದೆ.
ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಮಳವಳ್ಳಿಯಲ್ಲಿ ಕಠಿಣ ಭದ್ರತೆ ಕೈಗೊಳ್ಳಲಾಗಿದ್ದು, ಹೆಲಿಪ್ಯಾಡ್‌ನಲ್ಲಿ ಅಣಕು ಅಭ್ಯಾಸ ನಡೆಸಲಾಗಿದೆ. ಆರೋಗ್ಯ ಇಲಾಖೆಗೆ 24 ಗಂಟೆ ಸೇವೆ ಒದಗಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.



