ಮಂಡ್ಯ:– ಮಂಡ್ಯ ನಗರದ ಸೆಂಟ್ರಲ್ ಠಾಣಾ ವ್ಯಾಪ್ತಿಯಲ್ಲಿ ಮನೆ ಬಿಟ್ಟು ಇಬ್ಬರು ಶಾಲಾ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಜರುಗಿದೆ.
Advertisement
ರೋಹನ್, ಮನ್ವಿತ್ ಗೌಡ ನಾಪತ್ತೆಯಾದವರು. ಇವರು ಕ್ರಮವಾಗಿ 8 ಹಾಗೂ 9ನೇ ತರಗತಿ ಓದುತ್ತಿದ್ದರು ಎನ್ನಲಾಗಿದೆ. ಈ ಬಾಲಕರು ಮನೆಯಲ್ಲಿದ್ದ ಸುಮಾರು 50 ಸಾವಿರ ಹಣ ತೆಗೆದುಕೊಂಡು ನಾಪತ್ತೆಯಾಗಿದ್ದಾರೆ.
ಸ್ನೇಹಿತರ ಬಳಿ ಮಂತ್ರಾಲಯಕ್ಕೆ ಹೋಗುವುದಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳ ನಾಪತ್ತೆ ಕುರಿತು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರಿಂದ ಶೋಧ ನಡೆದಿದೆ.