ಮಂಡ್ಯ: ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ತಂಗಳಗೆರೆ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(34) ಮೃತ ಯುವ ರೈತನಾಗಿದ್ದು, ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದ ಚಂದ್ರಶೇಖರ. ಕಳೆದ ವರ್ಷ ಮಳೆ, ಬೆಳೆ ಇಲ್ಲದೇ ನಷ್ಟ ಅನುಭವಿಸಿದ್ದಾರೆ.
ಕೃಷಿಗಾಗಿ, ಮನೆ ಕಟ್ಟಲು, ಬ್ಯಾಂಕಿನಿಂದ ಹಾಗೂ ಕೈ ಸಾಲ ಮಾಡಿದ್ದರು. ಸಾಲ ಕೊಟ್ಟವರ ಕಿರುಕುಳ ಹೆಚ್ಚಾದ ಹಿನ್ನೆಲೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



