ಮಂಗಳೂರು: ಮಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್ಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನಿಂದ ತರಿಸಿಕೊಂಡು ತಲಪಾಡಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳ ಮೇಲೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮೊಹಮ್ಮದ್ ಶಿಫಾನ್ (28) ಅವರನ್ನು ಬಂಧಿಸಿದ್ದು, ಬಂಧಿತರಿಂದ 11.90 ಲಕ್ಷ ಮೌಲ್ಯದ 118.13 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಕ್ಕೆ ಪೋಲೀಸರು ಮುಂದಾಗಿದ್ದಾರೆ.



