ಇಂದಿನಿಂದ ಡಿ 22 ರವರೆಗೆ ಮಂಗಳೂರು – ಬೆಂಗಳೂರು ರೈಲು ಸಂಚಾರ ರದ್ದು

0
Spread the love

ಮಂಗಳೂರು:- ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿಗಾಗಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Advertisement

ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಕೆಲಸಗಳು ಆಗುತ್ತವೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ.

ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ಮಾಡಲಾಗುವುದು ಮತ್ತು ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ.

ಈ ಅವಧಿಯಲ್ಲಿ ಹಾಸನ ಜಂಕ್ಷನ್ ಯಾರ್ಡ್ ನಲ್ಲಿ ಸಿಗ್ನಲಿಂಗ್, ಇಂಟರ್ಲಾಕ್ ಮತ್ತು ಇತರ ಇಂಜಿನಿಯರಿಂಗ್ ವ್ಯವಸ್ಥೆ ಮರುವಿನ್ಯಾಸಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ರೈಲು ಸಂಚಾರ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here