ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ಫಾಲ್ಸ್ ಸಮೀಪದ ಕಾಡಿನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿ ಸುಮಂತ್ (28) ಹಾಗೂ ಗರ್ಡಾಡಿ ನಿವಾಸಿ ನವನೀತ್ (26) ಎಂದು ಗುರುತಿಸಲಾಗಿದೆ. ಏಪ್ರಿಲ್ 16ರಂದು ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿ ಈ ಕುರಿತು ಪೋಷಕರಿಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಬಳಿಕ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದರು. ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.



