ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ತೋಟಗಾರಿಕೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಮಾವು ಮೇಳವನ್ನು ಮೇ 13ರಿಂದ 17ರವರೆಗೆ ಆಯೋಜಿಸಲಾಗಿದ್ದು, ಮಾವು ಮೇಳದ ಉದ್ಘಾಟನಾ ಸಮಾರಂಭವನ್ನು ಮೇ 13ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಇಲಾಖೆ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಗಣಿ ಮತ್ತು ಭೂ-ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಗೌರವ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಹಾಪ್ ಕಾಮ್ಸ್ನ ಅಧ್ಯಕ್ಷ ಸಿದ್ದಪ್ಪಾ ಪ್ಯಾಟಿ ಹಾಗೂ ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲಾ ಇಖ್ಬಾಲ್, ತೋಗಾರಿಕೆ ನಿರ್ದೇಶಕ ರಮೇಶ ಡಿ.ಎಸ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ.ಬ್ಯಾಕೋಡ, ತೋಟಗಾರಿಕೆ (ಕ್ಷೇತ್ರ ಮತ್ತು ನರ್ಸರಿ) ಅಪರ ನಿರ್ದೇಶಕ ಡಾ. ಕೆ.ಎಂ. ಪರಶಿವಮೂರ್ತಿ, ತಾಳೆ ಬೆಳೆ ಯೋಜನೆಯ ತೋಟಗಾರಿಕೆ ಅಪರ ನಿರ್ದೇಶಕ ಡಾ. ಪಿ.ಎಂ. ಸೊಬರದ, ಬೆಂಗಳೂರ (ರಾತೋಮಿ) ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಧಾರವಾಡ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಕೆ.ಬಿ. ದುಂಡಿ ಹಾಗೂ ಬೆಳಗಾವಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಡಾ. ಸೋಮಶೇಖರ ಹುಲ್ಲೋಳಿ ಅವರು ಭಾಗವಹಿಸುವರೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಚಂದ್ರಕಾAತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.