ಮಾವು ಬೆಲೆ ಕುಸಿತ: ರಸ್ತೆಯಲ್ಲಿ ಹಣ್ಣುಗಳನ್ನು ಸುರಿದು ರೈತರ ಆಕ್ರೋಶ!

0
Spread the love

ಕೋಲಾರ:- ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ರೈತ ಮುಖಂಡರು, ರಸ್ತೆಯಲ್ಲಿ ಹಣ್ಣುಗಳನ್ನು ಸುರಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಇಂದು ಕೋಲಾರದ ಶ್ರೀನಿವಾಸಪುರದಲ್ಲಿ ರಸ್ತೆಗೆ ಮಾವಿನ ಹಣ್ಣುಗಳನ್ನು ಚಲ್ಲಿ ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಮಾವು ಬೆಳೆಗಾರರು, ಒತ್ತಾಯಿಸಿದರು. ಇನ್ನೂ ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ.

ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here