ಮನಮೋಹನ್ ಸಿಂಗ್ ವಿಧಿವಶ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ!

0
Spread the love

ನವದೆಹಲಿ:- ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಗುರುವಾರ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ನಾಳೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಗಳ ಶಿಲ್ಪಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿ ವಿಧಾನಗಳನ್ನು ಡಿಸೆಂಬರ್ 28 ರಂದು ನಡೆಸಲಾಗುವುದು.

ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ. ಆದರೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತದೆ. ಈ ಕುರಿತು ನಾವು ಅಧಿಕೃತವಾಗಿ ಅನೌನ್ಸ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ 92 ವರ್ಷದ ಮಾಜಿ ಪ್ರಧಾನಿಯವರು ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಸದ್ಯ ಅವರ ಪಾರ್ಥಿವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ರಾಜಕೀಯ ಗಣ್ಯರು ನಿವಾಸಕ್ಕೆ ಆಗಮಿಸುತ್ತಿದ್ದು ಮನಮಹೋನ್​ ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here