ಬೆಂಗಳೂರು:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ನಾಳೆ(ಶುಕ್ರವಾರ) ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ರವರು ತಮ್ಮ ಶಾಂತ ಸ್ವಭಾವ, ಆಳವಾದ ಜ್ಞಾನ ಮತ್ತು ಅಪ್ರತಿಮ ದೃಷ್ಟಿಕೋನದಿಂದ ದೇಶದ ಆರ್ಥಿಕತೆ ಹಾಗೂ ಆಡಳಿತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದಿದ್ದರು. ಇದೀಗ ಮನಮೋಹನ್ ಸಿಂಗ್ ಅವರು ಇಹಲೋಕ ತ್ಯಜಿಸಿದ್ದಾರೆ. ಇದೇ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಗೆ ಇಂದು ರಾತ್ರಿ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.