ನವದೆಹಲಿ: ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಇನ್ನೂ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.
Advertisement
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಹಾಜರಿದ್ದರು.