Mandya: ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್..!

0
Spread the love

ಮಂಡ್ಯ :- ಜಿಲ್ಲೆಯ ರೈತರು ತೀವ್ರ ಬರಗಾಲದ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ ರೈತರಿಂದ ಖರೀದಿಸುವ ಹಾಲಿನ ದರವನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ( ಮನ್ ಮುಲ್ )ಏಕಾಏಕಿ 1.50 ಪೈಸೆಯನ್ನು ಕಡಿತಗೊಳಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ.

Advertisement

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಡಿ.1 ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್‌ಗೆ ಸರಿ ಸುಮಾರು 1.50 ಪೈಸೆಗಳನ್ನು ಕಡಿತಗೊಳಿಸಿದೆ. ಈ ಕುರಿತು ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಪ್ರಕಟಣೆ ನೀಡಿದ್ದು, ಒಕ್ಕೂಟದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಹಾಲಿನ ಗುಣಮಟ್ಟ ಶೇ.4.0 ಜಿಡ್ಡು ಮತ್ತು ಶೇ.8.5 ಜಿಡ್ಡೇತರ ಘನಾಂಶದ ಹೊಂದಿರುವ ಸಂಘದಿಂದ ಖರೀದಿಸುವ ಪ್ರತಿ ಲೀ. ಹಾಲಿಗೆ ₹ 34.40 ಬದಲು ₹ 32.90 ಹಾಗೂ ಉತ್ಪಾದಕರಿಗೆ ನೀಡುತ್ತಿದ್ದ ₹ 33.50ರ ಬದಲು ₹ 32 ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here