ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಸಿಎ ಕೋರ್ಸಿನ 1ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಗರ ಅಗಡಿ 661 ಅಂಕ ಪಡೆದು ಪ್ರಥಮ ಸ್ಥಾನ, ಸುಜಾತಾ ಓಡ್ಸುಮಠ 656 ಅಂಕ ಪಡೆದು ದ್ವಿತೀಯ ಸ್ಥಾನ, ಅಭಿಷೇಕ ಹಬೀಬ 647 ಅಂಕ ಪಡೆದು ತೃತೀಯ ಸ್ಥಾನ, ರಾಜಶ್ರೀ ಕಬಾಡಿ 646 ಅಂಕ ಪಡೆದು 4ನೇ ಸ್ಥಾನ, ಸ್ನೇಹಾ ಮಾಳಶೆಟ್ಟಿ 639 ಅಂಕ ಪಡೆದು 5ನೇ ಸ್ಥಾನ ಪಡೆದುಕೊಂಡಿದ್ದಾರೆ.
ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಹ ಸಂಯೋಜಕರಾದ ಪ್ರೊ. ಸವಿತಾ ಪೂಜಾರ ಹಾಗೂ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.



