HomeGadag Newsಬಿಬಿಎ ಪರೀಕ್ಷೆಯಲ್ಲಿ ಮನೋರಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಬಿಬಿಎ ಪರೀಕ್ಷೆಯಲ್ಲಿ ಮನೋರಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಬಿಬಿಎ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಪರೀಕ್ಷೆಯಲ್ಲಿ ಕುಮಾರಿ ಯಶಸ್ವಿನಿ ಬಾಗೇವಾಡಿ ಅವರು 601 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಶಹತಾಜ್ ಖಾಜಿ ಅವರು 590 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದು, ಕುಮಾರಿ ಸಿಮ್ರಾನ್ ನದಾಫ ಅವರು 483 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಇನ್ನು ಕುಮಾರಿ ಸಾನಿಯಾ ಕುರುವಿನಕೊಪ್ಪ ಅವರು 477 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನ ಗಳಿಸಿದ್ದಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರ್ಮನ್ ಎನ್.ಎಂ. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಹಾಗೂ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ ಮತ್ತು ಚೇತನ ಕುಡತರಕರ ಶ್ಲಾಘಿಸಿದ್ದಾರೆ.

ಸಂಯೋಜಕಿ ಪ್ರೊ. ಆರತಿ ಗೌಡರ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img