ಬೆಂಗಳೂರು: ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ.
Advertisement
ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು.
ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.