ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನ.21 ಹಾಗೂ 22ರಂದು ಜರುಗಿದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಇಲ್ಲಿನ ಸನ್ಮಾರ್ಗ ಕಾಲೇಜಿನ ಮನ್ವಿತಾ ಬಡ್ನಿ ಹಾಗೂ ಅಮೃತಾ ಕಬಾಡಿ ಆಯ್ಕೆಯಾಗಿದ್ದಲ್ಲದೇ, ಮನ್ವಿತಾ ಬಡ್ನಿ ಏರ್ ರೈಫಲ್ ಪಿಪ್ ಸೈಟ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದದವರು ಶುಭ ಹಾರೈಸಿದ್ದಾರೆ.