ಕಾಂಗ್ರೆಸ್ ಆಡಳಿತದಲ್ಲಿ ಹಲವು ಬನಾನಾ ರಿಪಬ್ಲಿಕ್‌ʼಗಳನ್ನು ಮಾಡಿಕೊಂಡಿದ್ದಾರೆ: ಸಿ.ಟಿ.ರವಿ ವ್ಯಂಗ್ಯ

0
Spread the love

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಹಲವು ಬನಾನಾ ರಿಪಬ್ಲಿಕ್‌ʼಗಳನ್ನು ಮಾಡಿಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಹಲವು ಬನಾನಾ ರಿಪಬ್ಲಿಕ್‌ಗಳನ್ನು ಮಾಡಿಕೊಂಡಿದ್ದಾರೆ.

Advertisement

ಕಲಬುರಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಹೀಗೆ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು. ಇನ್ನೂ 2025ರಲ್ಲಾದರೂ ಕೂಡ ಕಾನೂನು ಎಲ್ಲರಿಗೂ ಸಮಾನವಾಗಿರಲಿ, ಸಂವಿಧಾನ ಎಲ್ಲರಿಗೂ ಅನ್ವಯಿಸಲಿ. ಬನಾನಾ ರಿಪಬ್ಲಿಕ್ ಆಗದಂತಿರಲಿ ಎಂದು ಆಶಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಂಡಿದೆ. ಸಾಧನೆ ಏನೆಂದು ಅವಲೋಕನ ಮಾಡಿದರೆ, ಬೆಲೆ ಏರಿಕೆ, ಭ್ರಷ್ಟಾಚಾರ ಕಣ್ಮುಂದೆ ನಿಲ್ಲುತ್ತದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ, ಹಾಲು, ಆಲ್ಕೋಹಾಲ್ ಸೇರಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here