ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು: ಸಚಿವ ಡಾ. ಜಿ ಪರಮೇಶ್ವರ್‌

0
Spread the love

ಬೆಳಗಾವಿ: ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ. ಕಲ್ಲು ಎಸೆದರು. ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು.

Advertisement

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ, ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿಯಮ ಉಲ್ಲಂಘನೆಯಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಎಲ್ಲರೂ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋದಾಖಲೆಗಳಿವೆ ಎಂದು ಹೇಳಿದರು.

ಇನ್ನೂ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್​ ಅನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುಮ್ಮನೆ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here