ಮಾರ್ಚ್‌ 16ರಂದು ದಿ. ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕೆ.ಎಚ್. ಪಾಟೀಲ ಪ್ರತಿಷ್ಠಾನ ವತಿಯಿಂದ ದಿ. ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ, ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ, ಸಮಿತಿಯ ಅಧ್ಯಕ್ಷ ಡಿ.ಆರ್. ಪಾಟೀಲ ತಿಳಿಸಿದರು.

Advertisement

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರು. ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸ್ಶೆಟಿಯ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.

ವಿ.ಪ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಘನ ಉಪಸ್ಥಿತಿ ವಹಿಸುವರು. ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಹಾಗೂ ಕೋ-ಆಪರೇಟಿವ್ ಫೆಡರೇಶನ್ ಅಧ್ಯಕ್ಷ ಜಿ.ಟಿ. ದೇವೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ವಿ.ಪ ಮಾಜಿ ಸಭಾಪತಿ ಬಿ.ಎಲ್. ಶಂಕರ, ಕಾರ್ಮಿಕ ಸಚಿವ ಸಂತೋಷ ಲಾಡ್, ಜವಳಿ, ಎಪಿಎಂಸಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾನೂನು ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮಾಜಿ ಅಧ್ಯಕ್ಷ ಗುರಣ್ ಬಳಗಾನೂರ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಮುಖಂಡರಾದ ರವಿ ಮೂಲಿಮನಿ, ಎಲ್.ಡಿ. ಚಂದಾವರಿ ಮುಂತಾದವರಿದ್ದರು.

ದಿ. ಕೆ.ಎಚ್. ಪಾಟೀಲರು 1954ರಲ್ಲಿ ರಾಜಕೀಯ ಜೀವನ ಆರಂಭಿಸಿ, ಸರಪಂಚರಾಗಿ, ಎಪಿಎಂಸಿ ಅಧ್ಯಕ್ಷರಾಗಿ, ದಿ. ಗದಗ ಕಾಟನ್ ಸೇಲ್ ಸೊಸೈಟಿ ಅಧ್ಯಕ್ಷರಾಗಿ, ರಾಜ್ಯದ ಪ್ರಭಾವಿ ಸಚಿವರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಕೆ.ಎಚ್. ಪಾಟೀಲರು ಎಪಿಎಂಸಿಯಲ್ಲಿ ಮೊಟ್ಟಮೊದಲ ಬಾರಿ ಟೆಂಡರ್ ಪದ್ಧತಿಯನ್ನು ಆರಂಭಿಸಿದರು ಎಂದು ಡಿ.ಆರ್. ಪಾಟೀಲ ತಿಳಿಸಿದರು.


Spread the love

LEAVE A REPLY

Please enter your comment!
Please enter your name here