ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ ಹಾಗೂ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆ ಗದಗ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2025ರ ನಿಮಿತ್ತ ಜಾಥಾ ಕಾರ್ಯಕ್ರಮ ಜರುಗಿತು.

Advertisement

ಜಿಲ್ಲಾ ಕುಟುಂಬ ಕಲ್ಯಾಣ ಯೋಜನಾ ಅಧಿಕಾರಿ ಡಾ. ವಾಯ್.ಕೆ. ಭಜಂತ್ರಿ ಹಾಗೂ ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ವೆಂಕಟೇಶ ರಾಠೋಡ ಹಸಿರು ನಿಶಾನೆ ತೋರಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ಜಾಧವ ಮತ್ತು ರೂಪಸೇನ ಚವ್ಹಾಣ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ, ವಾಯ.ಕೆ. ಹಕ್ಕಿ, ಎಸ್.ಹೆಚ್.ಐ.ಓ ಸರೋಜಾ ಕಟ್ಟಿಮನಿ, ಎಲ್.ಹೆಚ್.ವಿ ಸಿದ್ದಪ್ಪ ಲಿಂಗದಾಳ, ಹೆಚ್.ಐ.ಓ, ಡಿ.ಸಿ. ಹಿರೇಹಾಳ ಹೆಚ್.ಐ.ಓ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here