ಮಾರಿಕಾಂಬೆ ಅಮ್ಮನವರ ಮರದ ಗೊಂಬೆ ಕಳವು: ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ!

0
Spread the love

ಕಾರವಾರ:- ಮಾರಿಕಾಂಬೆ ದೇವಿಯ ಗೊಂಬೆ ನಾಪತ್ತೆ ಆಗಿದ್ದು, ಮುರಿನಕಟ್ಟೆಯಲ್ಲಿ ಸ್ಥಳೀಯರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಭಟ್ಕಳ ತಾಲೂಕಿನ ವಿವಾದಿತ ಸ್ಥಳವಾದ ಮುರಿನಕಟ್ಟೆಯಲ್ಲಿ ಜರುಗಿದೆ.

Advertisement

ಸದ್ಯ ವಿಷಯ ಎಲ್ಲೆಡೆ ಹರಡಿ ಸ್ಥಳಕ್ಕೆ ನೂರಾರು ಮಂದಿ ಜಮಾಯಿಸಿ ಕೆಲ ಕಾಲ ಆತಂಕ ಸೃಷ್ಟಿ ಆಗಿತ್ತು. ಭಟ್ಕಳ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಕೆಲವು ಹೊತ್ತು ಸ್ಥಳೀಯರಿಗೂ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಸ್ಥಳೀಯ ಹಿಂದೂ ಮುಖಂಡ ಗೋವಿಂದ ನಾಯ್ಕರಿಗೆ ಜಿಲ್ಲಾ ಎಸ್​​ಪಿ ಎಂ.ನಾರಾಯಣ್ ಕರೆ ಮಾಡಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಳಿಕ ಅಮ್ಮನರ ಹೊರೆಯನ್ನು ವಾಹನದಲ್ಲಿ ತುಂಬಿ ವೆಂಕಟಾಪುರ ಗಡಿಭಾಗಕ್ಕೆ ಸ್ಥಳೀಯರು ತಲುಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here