ಮಡಿಕೇರಿ: ಕೇರಳದಲ್ಲಿ ಕೊರೋನಾ ನರ್ತನದಿಂದ ಅಲರ್ಟ್ ಆಗಿರೋ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹೌದು ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ,
ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.