ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಚಲೋ ಬೆಳಗಾವಿ-ಅಂಬೇಡ್ಕರ್ ಜಾಥಾ-2 ಗದಗ ನಗರದ ಮುಳಗುಂದ ನಾಕಾದಲ್ಲಿ ಬೃಹತ್ ಸಮಾವೇಶ ನಡೆಸಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ ಕೋಡ್ಲುಪೇಟೆ ಮಾತನಾಡಿ, ೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ೧೦ ಸಾವಿರ ಕೋಟಿ ಮೀಸಲಿಡಬೇಕು. ಖಾಸಗಿ ವಲಯದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು. ಜಾಥಾದ ಸಂಚಾಲಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು. ಮುಸ್ಲಿಮರ 2ಬಿ ಮೀಸಲಾತಿಯನ್ನು ಪುನಃಸ್ಥಾಪಿಸಿ ಶೇಕಡಾ ೮ಕ್ಕೆ ಏರಿಸಬೇಕು. ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆನ್ನುವ ನಿರ್ಣಯವನ್ನು ಸದನದಲ್ಲಿ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರುವ SಅP/ಖಿSP ಹಣವನ್ನು ಬೇರೆ ಯಾವುದೇ ಯೋಜನೆಗಳಿಗೆ ಬಳಸಬಾರದು ಎಂದು ಆಗ್ರಹಿಸಿದರು.
ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಕ್ರಾಂತಿ ಗೀತೆ ಹೇಳಿದರು. ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು. ಇನ್ನೋರ್ವ ರಾಜ್ಯ ಕಾರ್ಯದರ್ಶಿ ರಂಜಾನ ಕಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಕ್ಷಬಿಲಾಲ್ ಗೋಕಾವಿ ವಂದಿಸಿದರು. ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಜಿಲ್ಲಾ ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ, ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಅಫ್ಫಾನ್, ಹಸನ ನಾಗನೂರ್, ದಾವಲ್ ರಾಜೇಖಾನ್, ಇಸ್ಮಾಯಿಲ್ ನದಾಫ್, ಅಬ್ದುಲ್ ಕಾಗದಗಾರ, ಮುಸ್ತಾಕ್ ಕಟ್ಟಿಮನಿ, ಮುಸ್ತಾಕ್ ಹೊಸಮನಿ, ಅನ್ವರ್ ಮುಲ್ಲಾ, ಮುಂತಾದ ದಲಿತಪರ ಹೋರಾಟಗಾರರು, ಸಾಮಾಜಿಕ ಹೋರಾಟಗಾರರು, ಕಾರ್ಯಕರ್ತರು, ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಅಧ್ಯಕ್ಷ ಬಿಲಾಲ್ ಗೋಕಾವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹೋರಾಟದ ಸಭೆಯನ್ನು ಉದ್ದೇಶಿಸಿ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ರಾಜ್ಯ ಸರ್ಕಾರ ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪಿಸಿ ಶೇ.8ಕ್ಕೆ ಏರಿಸಬೇಕು ಎಂದು ಒತ್ತಾಯಿಸಿದರು.