ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಾಮೂಹಿಕ ವಿವಾಹದಿಂದ ಆರ್ಥಿಕ ಹೊರೆ ಇಳಿಸಲು ಸಾಧ್ಯವಾಗುತ್ತದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಪಟ್ಟಣ ಸಮೀಪದ ಸೊರಟೂರ ಗ್ರಾಮದಲ್ಲಿ ದಸರಾ ಉತ್ಸವದ ನಿಮಿತ್ತ ಆದಿಶಕ್ತಿ ವಿವಿಧೋದ್ದೇಶ ಟ್ರಸ್ಟ್ ಹಾಗೂ ಸದ್ಭಕ್ತಿ ಮಂಡಳಿಯಿಂದ 11 ಜೋಡಿ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಿವಾನಂದ ಮಾದಣ್ಣವರು ಬಡತನದಲ್ಲಿ ಬೆಳೆದಿದ್ದು, ಬಡವರ ಬದುಕು ಹಸನಾಗಲಿ ಎಂಬ ಉದ್ದೇಶದಿಂದ ಉಚಿತ ಸಾಮೂಹಿಕ ವಿವಾಹ ನೆರವೇರಿಸಿರುವುದು ಶ್ಲಾಘನೀಯ. ಮದುವೆಯ ದುಂದುವೆಚ್ಚಕ್ಕೆ ಕಡಿವಾಣ ಹಾಕಲು, ಬಡವರ ಆರ್ಥಿಕ ಹೊರೆಯನ್ನು ಇಳಿಸಲು ಈ ಸಾಮೂಹಿಕ ವಿವಾಹ ಸಹಕಾರಿಯಾಗಿದೆ ಎಂದರು.
ತಾ.ಪಂ ಮಾಜಿ ಅಧ್ಯಕ್ಷ ಬಿ.ಆರ್. ದೇವರೆಡ್ಡಿ, ಶಿದ್ದಲಿಂಗೇಶ ಪಾಟೀಲ್, ಅಶೋಕ ಮಂದಾಲಿ, ಶಿವಾನಂದ ಮಾದಣ್ಣವರ, ಮಾಹಾದೇವಪ್ಪ ಮಾದಣ್ಣವರ ಮುಂತಾದವರು ಇದ್ದರು.



