ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತ್ಯಾಗ ಮತ್ತು ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಊರುಗಳಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಭಕ್ತಿ-ಶ್ರದ್ಧೆಯಿಂದ ಆಚರಿಸಿದರು. ಹಬ್ಬದ ನಿಮಿತ್ತ ಲಕ್ಷ್ಮೇಶ್ವರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ತೊಡಗಿದ್ದು, ರವಿವಾರ ಮುಸ್ಲಿಂ ಬಾಂಧವರು ಬಕ್ರೀದ ಹಬ್ಬದ ಹಿನ್ನೆಲೆಯಲ್ಲಿ ಸ್ಮಶಾನಗಳಲ್ಲಿನ ಹಿರಿಯರ ಗೋರಿಗಳನ್ನು ಯುವ ಸಮೂಹ ಸ್ವಚ್ಛಗೊಳಿಸುವ ಕಾರ್ಯವನ್ನು ಕೈಗೊಂಡು, ಬಕ್ರೀದ್ ದಿವಸ ಜಾಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಧಾನ, ಧರ್ಮದ ಮಹತ್ವವನ್ನು ಸಾರುವ ಬಕ್ರೀದ ಹಬ್ಬವನ್ನು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದಲ್ಲಿ ಬಕ್ರೀದ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಹೊಸ ಬಟ್ಟೆಗಳನ್ನು ತೊಟ್ಟು ಸಂಭ್ರಮದಿಂದ ಈದ್ಗಾ ಮೈದಾನಕ್ಕೆ ಆಗಮಿಸಿದ್ದರು. ಅಪಾರ ಸಂಖ್ಯೆಯಲ್ಲಿ ನೆರದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮ ಗುರುಗಳು ಬಕ್ರೀದ ಹಬ್ಬದ ಆಚರಣೆ ಮತ್ತು ಧಾನ-ಧರ್ಮದ ಕುರಿತು ಬೋಧನೆ ಮಾಡಿದರು.
ನಂತರ ಸಮಾಜದ ಬಾಂಧವರು ಪರಸ್ಪರ ಆಲಂಗಿಸಿಕೊಂಡು ಶುಭಾಷಯ ವಿನಿಮಯ ಮಾಡಿಕೊಂಡರು.