ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಕೊಚ್ಚಿ ಹೋದ ಗ್ರಾಮ! ಹಲವರು ನಾಪತ್ತೆ

0
Spread the love

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಡೆದ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು,

Advertisement

ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ.

ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಇನ್ನೂ ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here