ಬೆಂಗಳೂರು:– ಬೆಂಗಳೂರಿನ ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟಕ್ಕೆ ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ.
ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದೆ.



