HomeBengaluru Newsಆನೇಕಲ್‌ನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಪಿಜಿಯಲ್ಲಿದ್ದ 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ!

ಆನೇಕಲ್‌ನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಪಿಜಿಯಲ್ಲಿದ್ದ 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ!

For Dai;y Updates Join Our whatsapp Group

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಅವರಿಗೆ ಸೇರಿದ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. ಪಿಜಿಯನ್ನು ಅವರು ಬೇರೆಯವರಿಗೆ ಲೀಸ್ ನೀಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಸುಮಾರು 6 ಗಂಟೆ ವೇಳೆಗೆ ಕಾರ್ಮಿಕರು ಎದ್ದೇಳುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಪಿಜಿಯಲ್ಲಿದ್ದವರು ಆತಂಕದಿಂದ ಹೊರಗೆ ಓಡಿಬಂದಿದ್ದಾರೆ. ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕರು ವಾಸವಾಗಿದ್ದರು. ಗಾಯಗೊಂಡ ಎಲ್ಲರೂ ಹೊರರಾಜ್ಯದವರಾಗಿದ್ದು, ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಾಳುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img