ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಬೆಂಕಿ ಅವಘಡದಲ್ಲಿ 13 ಕಾರ್ಮಿಕರು ಸಾವು, ಹಲವರಿಗೆ ಗಾಯ

0
Spread the love

ಗಾಂಧಿನಗರ: ಗುಜರಾತ್‌ನ ಬನಸ್ಕಂತ ಜಿಲ್ಲೆಯ ದೀಸಾ ಪ್ರದೇಶದಲ್ಲಿ ಮಂಗಳವಾರ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 13 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

Advertisement

ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡು ಕಟ್ಟಡದ ಕೆಲವು ಭಾಗಗಳು ಕುಸಿದು ಬಿದ್ದಿವೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಬನಸ್ಕಾಂತ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯರಾಜ್ ಮಕ್ವಾನಾ ತಿಳಿಸಿದ್ದಾರೆ.

ಘಟನೆಯಲ್ಲಿ ಸುಮಾರು 13 ಮಂದಿ ಸಾವನ್ನಪ್ಪಿದ್ದಾರೆ. ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅವಶೇಷಗಳಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.


Spread the love

LEAVE A REPLY

Please enter your comment!
Please enter your name here