ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಸುಮಾರು 15 ಡೇರೆಗಳು ಹಾಗೂ 20ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಬೆಂಕಿಯ ಜ್ವಾಲೆ ಸುಮಾರು 3 ಕಿಲೋಮೀಟರ್ ದೂರದಷ್ಟು ವ್ಯಾಪಿಸಿತ್ತು. ಘಟನೆಯಿಂದ ಯಾತ್ರಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡದ ವೇಳೆ ಶಿಬಿರದಲ್ಲಿದ್ದ ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಉಂಟಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



