ಬೆಂಗಳೂರು: ನಗರದಲ್ಲಿ ಇಂದು ಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದ ಫ್ಯಾನ್ಸಿ ಸ್ಟೋರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.
ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಭಸ್ಮಗೊಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತಕ್ಷಣವೇ ಆರು ಅಗ್ನಿಶಾಮಕದಳ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ. ದಟ್ಟ ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಹಾಗೂ ಮಾಸ್ಕ್ ಧರಿಸಿ ಅಂಗಡಿ ಒಳಗೆ ಪ್ರವೇಶಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ಮುಂದುವರಿದಿದೆ.



