HomeIndia Newsದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

For Dai;y Updates Join Our whatsapp Group

ಕಾಸರಗೋಡು: ಪಟಾಕಿ ದುರಂತ ಸಂಭವಿಸಿ 150 ಮಂದಿ ಗಾಯಗೊಂಡಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದ ವೇಳೆ ಜರುಗಿದೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ದೇವಸ್ಥಾನದ ಅಧಿಕಾರಿಗಳು ಪಟಾಕಿ ಸಿಡಿಸಲು ಅನುಮತಿ ಪಡೆದಿದರಲಿಲ್ಲ. ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆ ಈಗಾಗಲೇ ಆರಂಭವಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ ಇಂಬಶೇಖರ್‌ ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img