ಬಿಡದಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳತನ, ದರೋಡೆ ಪ್ರಕರಣದ 8 ಆರೋಪಿಗಳು ಅರೆಸ್ಟ್!

0
Spread the love

ಬಿಡದಿ:- 10ಕ್ಕೂ ಹೆಚ್ಚು ಕಳ್ಳತನ, ದರೋಡೆ ಕೇಸ್‌ನಲ್ಲಿ ಭಾಗಿಯಾಗಿದ್ದ 8 ಆರೋಪಿಗಳನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಸದ್ದಾಂ ಹುಸೇನ್, ಶಿವಪ್ರಸಾದ್, ಯಶವಂತ್ ಕುಮಾರ್.ಆರ್ ಬಂಧಿತರು. ಒಟ್ಟು ನಾಲ್ವರು ಯುವಕರು ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕಿಯರ ಬಂಧಿಸಿದ್ದಾರೆ.

ನ.18ರಂದು ಆರೋಪಿಗಳು, ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದರು. ಬಳಿಕ ನಿರ್ಜನ ಪ್ರದೇಶ ಬರುತ್ತಿದ್ದಂತೆ ಕಾರನ್ನು ನಿಲ್ಲಿಸುವಂತೆ ತಿಳಿಸಿದ್ದಾರೆ. ರಾಡ್‌ನಿಂದ ಚಾಲಕನನ್ನು ಬೆದರಿಸಿ, ಆತನನ್ನು ಅಲ್ಲಿಯೇ ಇಳಿಸಿ, ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಚಾಲಕ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ದೂರಿನನ್ವಯ ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 3 ಕಾರು, 6 ಬೈಕ್, 1 ಆಟೋ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು ಬಿಡದಿ, ಕನಕಪುರ, ಚನ್ನಪಟ್ಟಣ, ಮಳವಳ್ಳಿ, ಶಿವಮೊಗ್ಗ, ಶ್ರೀರಂಗಪಟ್ಟಣ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ, 10ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.


Spread the love

LEAVE A REPLY

Please enter your comment!
Please enter your name here