ಬೆಂಗಳೂರು:- ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಮೌಲ್ಯದ ಮಾದಕವಸ್ತು ಸೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣ ಸಂಬಂಧ ಮೂವರು ವಿದೇಶಿಗರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 3.5 ಕೆಜಿ ತೂಕದ ಮೂರುವರೆ ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಹಾಗೂ ಹೈಡ್ರೋ ಗಾಂಜಾ ಸೀಜ್ ಮಾಡಿದ್ದಾರೆ.
ಆರೋಪಿಗಳು ಬೇರೆಡೆಯಿಂದ ಕಡಿಮೆ ಬೆಲೆಗೆ ಡ್ರಗ್ಸ್ ತರಿಸಿ ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.



