ಬೆಂಗಳೂರು: ಸದನದಲ್ಲಿ ಭಾರೀ ಗಲಾಟೆ ಗದ್ದಲ ಎಬ್ಬಿಸಿದ್ದಲ್ಲದೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪ ಮೇಲೆ 18 ಸದಸ್ಯರನ್ನು ಅಮಾನತು ಮಾಡಲಾಗಿದೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು.
ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಂ.ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ,
ಹರಿಶ್ ಬಿ.ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಸೇರಿ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದರು. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದರು.



