ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಿದ್ಧ ಗಣಿತ ತಜ್ಞರಾದ ಸರ್ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಗೌರವಾರ್ಥವಾಗಿ ಸ್ವತಃ ವಿದ್ಯಾರ್ಥಿಗಳೇ ತಯಾರಿಸಿದ ಗಣಿತ ಕಲಿಕೋಪಕರಣಗಳ ಮಾದರಿಗಳ ಪ್ರದರ್ಶನದ ಮೂಲಕ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಶೈಕ್ಷಣಿಕ ಮಾರ್ಗದರ್ಶಕರಾದ ಪ್ರತೀಕ ಎಸ್.ಹುಯಿಲಗೋಳ ಹಾಗೂ ಕ್ಲಸ್ಟರ್ ಸಂಖ್ಯೆ ೪ರ ಸಮೂಹ ಸಂಪನ್ಮೂಲ ಅಧಿಕಾರಿಗಳಾದ ರವಿ ಹೆಬ್ಬಳ್ಳಿ ಗಣಿತ ಶಾಸ್ತ್ರಜ್ಞ ಸರ್ ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳು ತಯಾರಿಸಿದ ಗಣಿತ ಕಲಿಕಾ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿ ರೇಣುಕಾ ವೆಂಕಟಾಪುರ, ಗಣಿತ ಕಲಿಕಾ ಮಾದರಿಗಳನ್ನು ತಯಾರಿಸಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಗಣಿತ ಶಿಕ್ಷಕಿ ಎಸ್.ವಿ. ಮೇಲಗಿರಿ, ಅರ್ಚನಾ ಗಿರಿತಿಮ್ಮಣ್ಣವರ, ಶಾಲೆಯ ಸಮಸ್ತ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



