ಚುನಾವಣೆಯಲ್ಲಿ ಎಲ್ಲರ ಆಶೀರ್ವಾದವಿರಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ 30 ವರ್ಷಗಳಿಂದ ಕಾರ್ಯಪ್ರವೃತ್ತನಾಗಿದ್ದು, ಈಗ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿದ್ದೇನೆ. ಹಾಗಾಗಿ ಎಲ್ಲರ ಸಹಕಾರ ಅತ್ಯಾವಶ್ಯಕ ಎಂದು ಡಾ. ಎಸ್.ಜಿ. ಸೊನೆಖಾನ್ ಹೇಳಿದರು.

Advertisement

ಮಂಗಳವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಮೂಲತಃ ಗದಗ ಜಿಲ್ಲೆಯವನೇ ಆಗಿದ್ದೇನೆ. ಉತ್ತರ ಕರ್ನಾಟಕದ ಯುವಕರಿಗೆ ಪ್ರವಾಸೋದ್ಯಮ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ವಿಫಲ ಅವಕಾಶಗಳಿವೆ. ಆದರೆ ಕೌಶಲ್ಯದ ಕೊರತೆಯಿಂದ ಯುವಕರು ಹಿಂದುಳಿಯುತ್ತಿದ್ದಾರೆ. ನನ್ನ 30 ವರ್ಷದ ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಅನುಭವಗಳನ್ನು ಯುವ ಜನತೆಯೊಂದಿಗೆ ಹಂಚಿ ಕೊಡುವ ಯುವಕರ ಶಕ್ತಿಯೊಂದಿಗೆ ಉನ್ನತವಾದ ಕರ್ನಾಟಕವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದು, ಎಲ್ಲರ ಬೆಂಬಲವನ್ನು ನಿರೀಕ್ಷಿಸುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಾನು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ. ಹಾಗಾಗಿ ನನಗೆ ಟಿಕೆಟ್ ಸಿಗುವ ಭರವಸೆಯಿದೆ. ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಬಸವರಾಜ ಕಲ್ಲೋಡಿ, ಸೋಮಶೇಖರ್ ಹೊನಗುಡಿ, ಹಸನಸಾಬ್ ಮುಳಗುಂದ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here