ಶಿವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ

0
vishwanatha
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸಭರಿತರಾಗಿ ಶಿವರಾತ್ರಿಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ ಎಂದು ಶ್ರೀ ಷ.ಬ್ರ. ಗುರು ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.

Advertisement

ಅವರು ವಿವೇಕಾನಂದ ನಗರದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ. ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂದು ಆಶೀರ್ವಚನ ನೀಡಿದರು.

ಜಿ.ಬಿ. ಗಾರವಾಡ, ಎಸ್.ಎಸ್. ಗೌಡರ ಅವರನ್ನು ಸನ್ಮಾನಿಸಲಾಯಿತು. ಕಸ್ತೂರಿಬಾಯಿ ಕಮ್ಮಾರ ಪ್ರಾರ್ಥನಾ ಗೀತೆ ಹಾಡಿದರು. ಕೋಶಾಧ್ಯಕ್ಷ ಎಂ.ಬಿ. ಚೆನ್ನಪ್ಪಗೌಡರ ಸ್ವಾಗತ ಹಾಗೂ ಪರಿಚಯ ಭಾಷಣ ಮಾಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಸಮಿತಿಯ ಕಾರ್ಯದರ್ಶಿ ಕೆ.ಆಯ್. ಕುರುಗೋಡು ಮಾಡಿದರು.

ಗೌರವಾಧ್ಯಕ್ಷ ಜಿ.ಜಿ. ಕುಲಕರ್ಣಿ, ಉಪಾಧ್ಯಕ್ಷ ಬಸವರಾಜ ಸುಂಕದ, ಸಹ ಕಾರ್ಯದರ್ಶಿ ಎಂ.ಕೆ. ಲಕ್ಕುಂಡಿ, ಕೋಶಾಧ್ಯಕ್ಷ ಎಂ.ಬಿ. ಚೆನ್ನಪ್ಪಗೌಡರ್, ಸಹ ಕೋಶಾಧ್ಯಕ್ಷ ಆರ್.ಬಿ. ಒಡೆಯರ, ನಿರ್ದೇಶಕರಾದ ವಿ.ಆರ್. ಕುಲಕರ್ಣಿ, ಅಮರೇಶ್ ಹಾದಿ, ಕಾರ್ತಿಕ್ ಮಡಿವಾಳರ್ ಮಹಾದೇವಿ ಗೋಗೇರಿ, ರಾಧಿಕಾ ಬಂದಂ, ಬಸವರಾಜ ಹಿರೇಮಠ, ಪ್ರಭಯಸ್ವಾಮಿ ಹಿರೇಮಠ ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಎಂ.ಎನ್. ಕಾಮನಹಳ್ಳಿ ಮಾತನಾಡಿ, ಪ್ರಪಂಚದಾದ್ಯAತ ಇರುವ ಹಿಂದೂಗಳಿಗೆ ಮಹಾ ಶಿವರಾತ್ರಿ ಬಹಳ ವಿಶೇಷವಾದ ದಿನವಾಗಿದೆ. ಇದು ಪ್ರತಿ ವರ್ಷ ನಡೆಯುವ ಒಂದು ದೊಡ್ಡ ಆಧ್ಯಾತ್ಮಿಕ ಆಚರಣೆಯಂತಿದೆ. ಅಲ್ಲಿ ಜನರು ಶಿವನಿಗೆ ತಮ್ಮ ಪ್ರೀತಿ ಮತ್ತು ಭಕ್ತಿಯನ್ನು ತೋರಿಸಲು ಒಟ್ಟಾಗಿ ಸೇರುತ್ತಾರೆ. ಈ ಕ್ರಿಯೆಗಳನ್ನು ಶುದ್ಧ ಹೃದಯ ಮತ್ತು ಶಿವನಿಗೆ ಆಳವಾದ ಭಕ್ತಿಯಿಂದ ಮಾಡಲಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here