ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಅನುಷ್ಠಾನವಾಗಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಕಾನೂನು ಪಾಲನೆ ಮಾಡಬೇಕಾಗುತ್ತದೆ. ಜನಪರ ಹಿತದ ಸಲುವಾಗಿ ಅಧಿಕಾರ ವಿಕೇಂದ್ರೀಕರಣಕ್ಕಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕಬಾರದು. ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದಲ್ಲಿಯೂ ಟಾಸ್ಕ್ಫೋರ್ಸ್ ಸಮಿತಿಗಳು ನಿಯಮಿತವಾಗಿ ಜರುಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು ಬಲವರ್ಧನೆಗೊಳಿಸುವ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ಎಂ. ವಿಜಯಾನಂದ ಮಾತನಾಡಿ, ಸಂಬಂಧಿತ ಇಲಾಖಾಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಗ್ರಾಮ ಸಭೆಗಳನ್ನು ಯಶಸ್ವಿಯಾಗಿ ನಡೆಸಬೇಕು. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆಯಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲೆಯಿಂದ ಆಯಾ ಇಲಾಖೆಯಲ್ಲಿರುವ ಅವಶ್ಯಕತೆಗಳನ್ನು, ನ್ಯೂನತೆಗಳನ್ನು ಪಟ್ಟಿಮಾಡಿ ಸರ್ಕಾರಕ್ಕೆ ಕಳುಹಿಸಿದರೆ ಇಲಾಖೆಯ ಕೇಂದ್ರ ಕಚೇರಿಯಲ್ಲಿಯೂ ಸಹ ಅನುದಾನದ ಕುರಿತು ಯೋಜನೆ ತಯಾರಿಸಲು ಸಹಾಯವಾಗುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬೇಡಿಕೆಗಳನ್ನು ಅವಶ್ಯಕತೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಮಾಜಿ ಶಾಸಕ ಡಿ.ಆರ್. ಪಾಟೀಲ, ಗಣ್ಯರಾದ ಸಿದ್ದು ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ಗಣ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here