HomeGadag Newsಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ

ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಏಪ್ರಿಲ್ 5ರಂದು ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಜಯಂತಿಯ ಅರ್ಥಪೂರ್ಣ ಹಾಗೂ ವ್ಯವಸ್ಥಿತ ಆಚರಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಕಲಾ ತಂಡಗಳೊಂದಿಗೆ ವ್ಯವಸ್ಥಿತ ಮೆರವಣಿಗೆ ಜರುಗಬೇಕು. ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸಕರ ಆಯ್ಕೆ, ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ, ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಫ್ಲೆಕ್ಸ್ ಬೋರ್ಡ್ ಅಳವಡಿಕೆ, ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮಹಿಳಾ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಹಾಗೂ ಸಮುದಾಯಗಳ ಪಾಲ್ಗೊಳ್ಳುವಿಕೆ, ಮಕ್ಕಳಿಗೆ ವಿವಿಧ ವೇಷ ಭೂಷಣ ಕಾರ್ಯಕ್ರಮ ಆಯೋಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ನಗರದ ವಿವಿಧ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ, ಎನ್.ಜಿ.ಓ, ಎನ್.ಎಸ್.ಎಸ್., ಎನ್.ಸಿಸಿ ಸಂಘಟನೆಗಳ ಭಾಗವಹಿಸುವಿಕೆ, ರೈತರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನರು ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆ, ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಕುರಿತು ವಿವಿಧ ಸಂಘಟನೆಗಳು, ಸಮುದಾಯಗಳ ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ಸಭೆಯ ಗಮನಕ್ಕೆ ತಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸರ್ವರನ್ನು ಸ್ವಾಗತಿಸಿ ವಂದಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ವಿವಿಧ ಇಲಾಖೆ ಅಧಿಕಾರಿಗಳು, ಸಂಸ್ಥೆಗಳ, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.

ಏಪ್ರಿಲ್ 5ರಂದು ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಆಡಿಟೋರಿಯಂ ಹಾಲ್‌ನಲ್ಲಿ ಆಚರಿಸಲಾಗುವುದು. ಏಪ್ರಿಲ್ 14ರಂದು ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳೊಂದಿಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!