ವಿಜಯಸಾಕ್ಷಿ ಸುದ್ದಿ, ಮುಳಗುಂದ: 2025‑26ನೇ ಸಾಲಿನ ಹಿಂಗಾರು ಹಂಗಾಮಿನ ರಿಯಾಯಿತಿ ದರದ ಕಡಲೆ ಹಾಗೂ ಜೋಳದ ಬಿತ್ತನೆ ಬೀಜಗಳನ್ನು ಹುಲಕೋಟಿ ಗ್ರಾ.ಪಂ ಅಧ್ಯಕ್ಷೆ ನಾಗರತ್ನಾ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರಿಗಾಗಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಹುಲಕೋಟಿ ಕೃಷಿ ಕೇಂದ್ರದ ಕೃಷಿ ಸಹಾಯಕ ನಿರ್ದೇಶಕಿ ರಾಜೇಶ್ವರಿ ಚಿನಿವಾಲರ್, ಪರಮೇಶ್ವರಪ್ಪ ಜಂಟ್ಲಿ, ಕೃಷಿ ಕೇಂದ್ರದ ಸಿಬ್ಬಂದಿ ಹಾಗೂ ರೈತ ಬಾಂಧವರು ಇದ್ದರು.



