ವಿಜಯಸಾಕ್ಷಿ ಸುದ್ದಿ, ಗದಗ: ಸರಳತೆಗೆ ಮಾದರಿಯಾದ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಈ ಬಾರಿ ದಸರಾ ಹಬ್ಬವನ್ನು ಕಂದಾಯ ವಸತಿ ಆವರಣದಲ್ಲಿ ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಆಚರಿಸಿ ಹೊಸ ಸಂದೇಶ ನೀಡಿದ್ದಾರೆ.
ಅಕ್ಟೋಬರ್ 2ರಂದು ಕಂದಾಯ ವಸತಿ ಆವರಣದಲ್ಲಿ ನಡೆದ ವಿಜಯದಶಮಿ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನೌಕರರು, ಸ್ವಚ್ಛತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು. ಹಬ್ಬದ ಸಂಭ್ರಮವನ್ನು ಎಲ್ಲರೊಡನೆ ಹಂಚಿಕೊಡುವುದಕ್ಕಾಗಿ ಜಿಲ್ಲಾಧಿಕಾರಿ ಹೂವು–ಹಣ್ಣಿನ ವಿನಿಮಯ ಮಾಡಿ ದಸರಾ ಶುಭಾಶಯ ಕೋರಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಮ್ಮ ಕುಟುಂಬದ ಸದಸ್ಯರೊಂದಿಗೆ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿ ಆಚರಿಸಿದ ಈ ಸರಳ ದಸರಾ ಕಾರ್ಯಕ್ರಮದಲ್ಲಿ ಎಲ್ಲರೂ ಸಮಾನವಾಗಿ ಹಬ್ಬದ ಆನಂದವನ್ನು ಹಂಚಿಕೊಟ್ಟರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ನಗರ ಸಭೆ ಪೌರಾಯುಕ್ತ ರಾಜಾರಾಮ ಪವಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಆನಂದ ಬದಿ ಸೇರಿದಂತೆ ಇತರರು ಇದ್ದರು.