HomeGadag Newsವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ: ಸಚಿವ ಎಚ್.ಕೆ. ಪಾಟೀಲ

ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ: ಸಚಿವ ಎಚ್.ಕೆ. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ೧೯೨೪ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಕಾನೂನು, ಪ್ರವಾಸೊದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಬೆಳಗಾವಿ ಸುವರ್ಣಸೌಧ ಆವರಣದಲ್ಲಿ ಬುಧವಾರ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ೧೯೨೪ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ ಸುಧಾರಣೆಯ ಅಸ್ತçವಾಗಿತ್ತು. ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ‍್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು ಎಂದು ತಿಳಿಸಿದರು.

೧೯೨೪ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ  ಶತಮಾನೋತ್ಸವನ್ನು ಆಚರಿಸುವ ಮೂಲಕ ಅಂದಿನ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ವಿವರಿಸಿದರು.

ಸುವರ್ಣ ಸೌಧದಲ್ಲಿನ ಮಹಾತ್ಮ ಗಾಂಧೀಜಿ ಅವರ ಬೃಹತ್ ಪ್ರತಿಮೆಯನ್ನು ಡಿ.೨೭ರಂದು ಮುಂಜಾನೆ ೧೦ ಗಂಟೆಗೆ ಅನಾವರಣಗೊಳಿಸಲಾಗುವದು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ‍್ಯ ಹೊರಾಟಗಾರರನ್ನು ಆತ್ಮೀಯವಾಗಿ ಆಹ್ವಾನಿಸಲಾಗಿದೆ.

ಡಿ.೨೬ರಂದು ನಗರದ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಸಭಾಪತಿಗಳಾದ ಬಿ.ಎಲ್. ಶಂಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ, ಅಧಿಕಾರಿಗಳು, ಜನ ಪ್ರತಿನಿಧಿಗಳು  ಹಾಜರಿದ್ದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರಕಾರ ೪೧ ಕಾರ್ಯಕ್ರಮಗಳನ್ನು  ಘೋಷಣೆ ಮಾಡಿ, ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದೆ ಎಂದು ಸಚಿವ ಎಚ್.ಕೆ. ಪಾಟೀಲ ವಿವರಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!