ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆಂಜನೇಯನ ದೇವಸ್ಥಾನದಲ್ಲಿ ದನದ ಮಾಂಸದ ತ್ಯಾಜ್ಯ ಪತ್ತೆಯಾಗಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ನವೆಂಬರ್ 15ರ ಮುಂಜಾನೆ ಅರ್ಚಕರು ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದಾಗ ಆವರಣದಲ್ಲಿ ದನದ ಮಾಂಸದ ತ್ಯಾಜ್ಯ ಬಿಸಾಡಿರುವುದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ದೇವಸ್ಥಾನದ ಬಳಿ ಮಾಂಸದ ತ್ಯಾಜ್ಯ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೃತ್ಯವನ್ನು ಖಂಡಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ದೇವಸ್ಥಾನದ ಬಳಿ ಮಾಂಸದ ತ್ಯಾಜ್ಯ ಎಸೆದವರನ್ನು ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.









