ವಿಜಯಸಾಕ್ಷಿ ಸುದ್ದಿ, ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ 40ನೇ ವರ್ಷಾಚರಣೆ ಸಮಾರೋಪ ಸಮಾರಂಭದ ಅಂಗವಾಗಿ ಜುಲೈ 8, 9ರಂದು ಕವಿವಿ ಮಾನಸೋಲ್ಲಾಸ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಹಾಗೂ ರೈನ್‌ಬೋ ರಾಜ್ಯ ಮಟ್ಟದ ಮೀಡಿಯಾ ಫೆಸ್ಟ್ ಕಾರ್ಯಕ್ರಮ ಕುರಿತ ಪೋಸ್ಟರ್‌ನ್ನು ಕುಲಪತಿ ಪ್ರೊ. ಕೆ.ಬಿ. ಗುಡಸಿ ಇತ್ತೀಚೆಗೆ ಬಿಡುಗಡೆ ಮಾಡಿದರು.
Advertisement
ರಾಷ್ಟ್ರಮಟ್ಟದ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸೂಚಿಸಿದರು. ವಿಭಾಗದ ಮುಖ್ಯಸ್ಥ ಪ್ರೊ. ಜೆ.ಎಂ. ಚಂದುನವರ, ಸಹ ಪ್ರಾಧ್ಯಾಪಕ ಡಾ. ಸಂಜಯಕುಮಾರ ಮಾಲಗತ್ತಿ, ಮಹಾಂತ ಪದವಿ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕಿ ಜಯಲಕ್ಮೀ ಯಂಡಿಗೇರಿ, ಡಾ. ಪ್ರಭಾಕರ ಕಾಂಬಳೆ, ಪ್ರಕಾಶ ಚಳಗೇರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.