HomeGadag Newsಮಾಧ್ಯಮ ಮಿತ್ರರ ಕ್ರೀಡಾಸಕ್ತಿ ಉತ್ತಮ ಬೆಳವಣಿಗೆ: ಎಚ್.ಕೆ.ಪಾಟೀಲ

ಮಾಧ್ಯಮ ಮಿತ್ರರ ಕ್ರೀಡಾಸಕ್ತಿ ಉತ್ತಮ ಬೆಳವಣಿಗೆ: ಎಚ್.ಕೆ.ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮಾಧ್ಯಮ ಕ್ಷೇತ್ರದವರು ಕ್ರಿಕೆಟ್ ಲೀಗ್‌ನಲ್ಲಿ ಉತ್ಸಾಹದಿಂದ ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವಯಸ್ಸಿನ ಅಂತರವೇ ಕಾಣಿಸುವುದಿಲ್ಲ. ಕ್ರೀಡೆಯಿಂದ ಉತ್ಸಾಹ, ಹುರುಪು ಹೆಚ್ಚುತ್ತದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ವ್ಹಿಡಿಎಸ್ ಮೈದಾನದಲ್ಲಿ ಆಯೋಜಿಸಿದ್ದ ಗದಗ ಮೀಡಿಯಾ ಕ್ರಿಕೆಟ್ ಲೀಗ್‌ನ ಫೈನಲ್ ಪಂದ್ಯಕ್ಕೆ ಟಾಸ್ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರಿಕೆಟ್ ಇತ್ತೀಚೆಗೆ ಹೆಚ್ಚು ಜನಪ್ರಿಯವಾಗುತ್ತಿದೆ. ಆಟಗಾರರು ಸಮವಸ್ತ್ರ ಧರಿಸಿ ಮೈದಾನಕ್ಕಿಳಿಯುವುದು ಆಟಗಾರರಿಗಷ್ಟೇ ಅಲ್ಲದೆ ಅವರ ಮಕ್ಕಳು ಹಾಗೂ ಮೊಮ್ಮಕ್ಕಳಿಗೂ ಸಂತಸ ನೀಡುತ್ತದೆ. ಕ್ರೀಡೆ ಮನರಂಜನೆಯ ಜೊತೆಗೆ ಆರೋಗ್ಯಕರ ಚಟುವಟಿಕೆಯೂ ಆಗಿದೆ. ಕ್ರೀಡೆಯ ಮೂಲಕ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಎಲ್ಲರಿಗೂ ಅವಕಾಶವಿದೆ ಎಂದರು.

ಕ್ರಿಕೆಟ್ ಲೀಗ್ ಆಯೋಜಿಸಲು ಶ್ರಮಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಕಾನಿಪ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಜಿಲ್ಲಾ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ಕ್ರಿಕೆಟ್ ಲೀಗ್ ಆಯೋಜಿಸಲಾಗಿದೆ. ಲೀಗ್‌ನ ವಿಜೇತ ತಂಡಕ್ಕೆ ₹೫,೫೫೫ ನಗದು ಹಾಗೂ ಟ್ರೋಫಿ, ರನ್ನರ್‌ಅಪ್ ತಂಡಕ್ಕೆ ₹೩,೩೩೩ ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದರು.

ನಾಲ್ಕೂ ತಂಡಗಳ ಮಾಲೀಕರು, ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಹಕಾರದಿಂದ ಕ್ರಿಕೆಟ್ ಲೀಗ್ ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ, ರವಿಕಾಂತ ಅಂಗಡಿ, ದೇವಪ್ಪ ಲಿಂಗದಾಳ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಅಶೋಕ ಮಂದಾಲಿ, ಸಿದ್ದು ಪಾಟೀಲ, ತಂಡಗಳ ಮಾಲೀಕರಾದ ಜಗದೀಶ್ ಎಸ್.ಪಿ., ಅಜಿತ್ ಹೊಂಬಾಳಿ, ಎಚ್.ಎಂ. ಶರೀಫನವರ್, ಆನಂದ ಸಾಲಿಗ್ರಾಮ, ಆನಂದಯ್ಯ ವಿರಕ್ತಮಠ, ಅನಂತ ಕಾರ್ಕಳ, ಟಿ.ಎನ್. ಬಾಂಡಗೆ, ಸುನಿಲ್ ತೆಂಬದಮನಿ, ಅನಿಲ್ ತೆಂಬದಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಇದೇ ಮೊದಲ ಬಾರಿಗೆ ಕ್ರಿಕೆಟ್ ಲೀಗ್ ಆಯೋಜಿಸಲಾಗಿದೆ. ಎಲ್ಲ ತಂಡಗಳ ಮಾಲೀಕರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದಿಂದ ಲೀಗ್ ಯಶಸ್ವಿಯಾಗಿದೆ.

— ರಾಜು ಎಂ. ಹೆಬ್ಬಳ್ಳಿ, ಜಿಲ್ಲಾಧ್ಯಕ್ಷ, ಕಾನಿಪ ಸಂಘ, ಗದಗ

ಮೈದಾನದಲ್ಲಿ ಪತ್ರಕರ್ತರು ತೋರಿಸುವ ಕ್ರೀಡಾ ಮನೋಭಾವ ವೃತ್ತಿಯಲ್ಲೂ ಕಾಣಿಸಲಿ. ಸಮಾಜವನ್ನು ತಿದ್ದುವ ಬಹುದೊಡ್ಡ ಶಕ್ತಿಯಾಗಿರುವ ಮಾಧ್ಯಮ ಕ್ಷೇತ್ರದವರು ಕ್ರೀಡೆಯ ಮೂಲಕ ಇನ್ನಷ್ಟು ಉತ್ಸಾಹ ಮತ್ತು ಹುರುಪು ಪಡೆದುಕೊಳ್ಳಲಿ.

— ಎಚ್.ಕೆ. ಪಾಟೀಲ, ಶಾಸಕ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img