ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ.
ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಮುಡಾ ಎಂದು ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಇದೇನು ಮುಖ್ಯಮಂತ್ರಿಗಳೆ? ಇದು ಅತ್ಯಂತ ಜನ ವಿರೋಧಿ ಸರ್ಕಾರ. ಇದು ಯೂಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾರ್ಡ್ ರದ್ದು ಮಾಡಿರುವುದನ್ನು ವಿರೋಧಿಸಿದ ಮೇಲೆ ಈಗ ವಾಪಸ್ ತೆಗೆದುಕೊಳ್ಳುವ ಕೆಲಸ ಮಾಡುತ್ತಾರೆ. ರೇಷನ್ ಕಾರ್ಡ್ ರದ್ದಾದವರು ಅರ್ಜಿ ಹಾಕಿದರೆ ತಕ್ಷಣ ವಾಪಸ್ ಕೊಡಲಾಗುವುದು ಎಂದು ಹೇಳುತ್ತಾರೆ. ಅರ್ಜಿ ಹಾಕಿದ ಮೇಲೆ ಕಾರ್ಡ್ ಬರುವುದು ಯಾವಾಗ? ಅಲ್ಲಿಯ ತನಕ ಕಾರ್ಡ್ ರದ್ದಾಗಿರುವ ಬಡವರು ಏನು ತಿನ್ನಬೇಕು ಎಂದು ಕಿಡಿಕಾರಿದರು.