`ಮೀಲಾಂಜೆ-2024′ ಸಾಂಸ್ಕೃತಿಕ ಹಬ್ಬ

0
``Meelanje-2024'' is a cultural festival
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಉನ್ನತ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಹೆಸರಾಗಿರುವ ಲಕ್ಷ್ಮೇಶ್ವರದ ಶ್ರೀಮತಿ ಕಮಲಾ ಶ್ರೀ ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ.24 ಮತ್ತು 25 ರಂದು ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಬ್ಬ `ಮೀಲಾಂಜೆ-2024′, ಪದವಿ ಪ್ರದಾನ ಸಮಾರಂಭ ಮತ್ತು ಹಳೆ ವಿದ್ಯಾರ್ಥಿಗಳ ಪುನರ್‌ಮಿಲನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ. ಪರಶುರಾಮ ಬಾರಕಿ ತಿಳಿಸಿದರು.

Advertisement

ಅವರು ಬುಧವಾರ ಕಾಲೇಜಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಹುಟ್ಟೂರಿನಲ್ಲಿ ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ ಸೇವೆ ಮಾಡಬೇಕೆಂದು ಸಂಸ್ಥಾಪಕರಾಗಿದ್ದ ದಿ.ವೆಂಕಪ್ಪ ಅಗಡಿಯವರು ತಾಂತ್ರಿಕ ಕಾಲೇಜು, ಆಸ್ಪತ್ರೆ, ದೇವಸ್ಥಾನ ಸ್ಥಾಪಿಸುವ ಮೂಲಕ ವಿಶೇಷ ಕೊಡುಗೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿಯೇ ಗ್ರಾಮೀಣ ಮಟ್ಟದಲ್ಲಿ ಉತ್ತಮ ದರ್ಜೆಯ ಶಿಕ್ಷಣ ನೀಡುತ್ತಿರುವ ಅಗಡಿ ಸಂಸ್ಥೆಯು 21 ವರ್ಷಗಳಿಂದ ಶಿಕ್ಷಣ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದೆ. 2 ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸುವ ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳು ಮೀಲಾಂಜೆ-24ರಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ.

ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಮೇಳ ಮೀಲಾಂಜೆ-24 ಸಮಾರಂಭ ಮೇ 24ರ ಬೆಳಿಗ್ಗೆ 10ಕ್ಕೆ ಸಿವಿಲ್ ಸಭಾಂಗಣದಲ್ಲಿ ನಡೆಯಲಿದೆ. ಹುಬ್ಬಳ್ಳಿಯ ಶ್ರಾವಣಿ ಪವಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವಿಧ ಕಾಲೇಜುಗಳಿಂದ ಸುಮಾರು 40-50 ತಂಡದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮೇ.25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾಲೇಜಿನ ಪದವಿ ಪೂರೈಸಿರುವ 226 ಪದವೀಧರರಿಗೆ ಪದವಿ ಪ್ರಧಾನ ಸಮಾರಂಭವು ನಡೆಯಲಿದೆ. ಬಾಗಲಕೋಟಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಆನಂದ ದೇಶಪಾಂಡೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಅವಿಷ್ಕಾರಗಳ ಪ್ರದರ್ಶನ ಮಾಡಲಿದ್ದಾರೆ. ಸಂಜೆ ಹಳೆಯ ವಿದ್ಯಾರ್ಥಿಗಳ ಪುನರ್‌ಮಿಲನ ಕಾರ್ಯಕ್ರಮಕ್ಕೆ ಬಿಫಿನ್ ಜುಗನಿಕರ್ ಅತಿಥಿಗಳಾಗಿ ಆಗಮಿಸಲಿದ್ದು, ಅಂದು ಪಾಲಕರು, ವಿವಿಧ ಗಣ್ಯರು ಆಗಮಿಸಲಿದ್ದಾರೆ. ಅಲ್ಲದೆ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 2 ದಿನಗಳು ಕಾಲೇಜಿನಲ್ಲಿ ಹಬ್ಬದ ಸಂಭ್ರಮವಿರುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮಗಳ ಸಂಚಾಲಕರಾಗಿರುವ ಪ್ರೊ. ರಾಜೇಶ್ವರಿ ಗಾಮನಗಟ್ಟಿ, ರಾಜೇಂದ್ರ ಶೆಟ್ಟರ, ಪ್ರೊ. ಶಂಭುಲಿಂಗ, ಡಾ. ಅರುಣ ಕುಂಬಿ, ಪ್ರೊ. ಪ್ರತಿಮಾ ಕೆ., ಡಾ. ಎಸ್.ವಿ. ಮಹಾಪುರುಷ, ಪ್ರೊ. ಪ್ರತಿಮಾ ಮಹಾಪುರುಷ, ಪ್ರೊ. ಸೋಮಶೇಖರ ಕೆರಿಮನಿ, ಪ್ರೊ. ಎಸ್.ಎಫ್. ಕೊಡ್ಲಿ, ಡಾ. ಸ್ವಪ್ನಾ ಜಿ., ಡಾ.ಮಹಾಂತೇಶ ತಟ್ಟಿಮನಿ ಹಾಜರಿದ್ದರು.

ಡಾ. ಗಿರೀಶ ಯತ್ತಿನಹಳ್ಳಿ, ಡಾ. ಸುಭಾಸ ಮೇಟಿ ಮಾತನಾಡಿ, ಇದೊಂದು ವೈಶಿಷ್ಟ್ಯಪೂರ್ಣ ಕಾರ್ಯಕ್ರಮವಾಗಿದ್ದು, ವಿಶೇಷ ಅತಿಥಿಗಳ ಮಾರ್ಗದರ್ಶನದ ಜೊತೆಗೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳು ನಡೆಯಲಿದ್ದು, ಈ ಎಲ್ಲ ಕಾರ್ಯಕ್ರಮಗಳಿಗೆ ಪ್ರಾಚಾರ್ಯ ಡಾ. ಪರಶುರಾಮ ಬಾರಕಿ ಅವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here