ಬೆಂಗಳೂರು: ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಅದಲ್ಲದೆ ಕಾಂಗ್ರೆಸ್ನಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದೆ ಎಂಬ ಚರ್ಚೆ ಶುರುವಾಗಿದೆ.
ಈ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಭೇಟಿಯ ಸಮಯದಲ್ಲೇ ಜಾರಕಿಹೊಳಿ ಜೊತೆ ವಿಜಯೇಂದ್ರ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮನವಿ ಸ್ವೀಕಾರದ ಬಳಿಕ ನಿಮ್ಮ ಜೊತೆಗೆ ಮಾತುಕತೆ ನಡೆಸಬೇಕು ಬನ್ನಿ ಸರ್ ಎಂದು ವಿಜಯೇಂದ್ರ ಜಾರಕಿಹೊಳಿ ಅವರನ್ನು ಕರೆದಿದ್ದಾರೆ. ಬಿವೈವಿ ಕರೆದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.